ನ್ಯೂಡೆಲ್ಲಿ : ಕಷ್ಟಪಟ್ಟು ಬೆಳೆದ ಬೆಳೆಗೆ ಬೆಂಬಲ ಬೆಲೆಗಾಗಿ ಒಂದು ವರ್ಷಕ್ಕೂ ಹೆಚ್ಚು ಕಾಲ ದೇಶದ ರಾಜಧಾನಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದು ಗೊತ್ತೇ ಇದೆ. ಸತತವಾಗಿ ಮೂರನೇ ಅವಧಿಗೆ ಮೋದಿ ಪ್ರಧಾನಿಯಾದ ನಂತರ 14 ಬೆಳೆಗಳಿಗೆ ಬೆಂಬಲ ಬೆಲೆಯನ್ನು ಹೆಚ್ಚಿಸುವುದಾಗಿ ಎರಡು ದಿನಗಳ ಹಿಂದೆ ಕೇಂದ್ರ ಸರ್ಕಾರ ಘೋಷಿಸಿತು.
ಈ ಹಿನ್ನೆಲೆಯಲ್ಲಿ ಮೋದಿ ಸರ್ಕಾರ ಭತ್ತಕ್ಕೆ ಬೆಂಬಲ ಬೆಲೆ ಹೆಚ್ಚಿಸಿರುವುದು ಯಾವುದೇ ಪ್ರಯೋಜನವಾಗಿಲ್ಲ ಎಂದು ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಮತ್ತೊಮ್ಮೆ ಸಂಯುಕ್ತ ಕಿಸಾನ್ ಮೋರ್ಚಾ (SKM) ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದೆ. ಈ ಆಂದೋಲನ ಕಾರ್ಯಕ್ರಮಗಳನ್ನು ರೂಪಿಸಲು ಜುಲೈ 10 ರಂದು ದೆಹಲಿಯಲ್ಲಿ ಎಸ್ಕೆಎಂ ಸಾಮಾನ್ಯ ಸಭೆ ನಡೆಯಲಿದೆ.
ಈ ಸಂದರ್ಭದಲ್ಲಿ ಎಸ್ ಕೆಎಂ ಮುಖಂಡರು ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮೋದಿ ಸರಕಾರ ಲಾಭದಾಯಕವಲ್ಲದ ಬೆಂಬಲ ಬೆಲೆ ಘೋಷಿಸುವ ಮೂಲಕ ರೈತರನ್ನು ಅಪಹಾಸ್ಯ ಮಾಡಿದೆ ಎಂದು ಟೀಕಿಸಿದರು.
Leave a reply