ನ್ಯೂಡೆಲ್ಲಿ : ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿಎನ್ ಸಾಯಿಬಾಬಾ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ವಾರದ ಹಿಂದೆ ನಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಸಾಯಿಬಾಬಾ ಅವರನ್ನು 2014ರಲ್ಲಿ ಮಾವೋವಾದಿಗಳೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದರು. ಅವರನ್ನು ನಾಗ್ಪುರ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು. 2017 ರಲ್ಲಿ, ಗಡ್ಚಿರೋಲಿ ಸೆಷನ್ಸ್ ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತು. ಇದರಿಂದಾಗಿ ಅವರು ಸುಮಾರು ಒಂಬತ್ತು ವರ್ಷಗಳ ಕಾಲ ಜೈಲಿನಲ್ಲಿ ಕಳೆಯಬೇಕಾಯಿತು. ಬಾಂಬೆ ಹೈಕೋರ್ಟ್ ಅವರನ್ನು ಖುಲಾಸೆಗೊಳಿಸಿದ ನಂತರ ಸಾಯಿಬಾಬಾ ಅವರನ್ನು ಇದೇ ಮಾರ್ಚ್ 5 ರಂದು (9 ತಿಂಗಳ ಹಿಂದೆ) ನಾಗ್ಪುರ ಜೈಲಿನಿಂದ ಬಿಡುಗಡೆ ಮಾಡಲಾಯಿತು.
90% ಅಂಗವೈಕಲ್ಯದೊಂದಿಗೆ ಗಾಲಿಕುರ್ಚಿಗೆ ಸೀಮಿತವಾಗಿರುವ ಸಾಯಿಬಾಬಾ ಅವರು ಮಾವೋವಾದಿಗಳೊಂದಿಗೆ ಸಂಬಂಧ ಹೊಂದಿರುವ ಮೂಲಕ ದೇಶದ್ರೋಹ ಕೃತ್ಯಗಳಲ್ಲಿ ತೊಡಗಿದ್ದಾರೆ ಎಂಬ ಆರೋಪದ ಮೇಲೆ ಅವರೊಂದಿಗೆ ಇತರೆ ಐವರನ್ನು ಮಹಾರಾಷ್ಟ್ರ ಮತ್ತು ಗಡ್ಚಿರೋಲಿ ವಿಚಾರಣಾ ನ್ಯಾಯಾಲಯವು ಜೀವಾವಧಿ ಶಿಕ್ಷೆಗೆ ಗುರಿಪಡಿಸಿತು. ಆದ್ದರಿಂದ 2017 ರಿಂದ ನಾಗ್ಪುರ ಜೈಲಿನಲ್ಲಿದ್ದರು. ಈ ಹಿಂದೆಯೂ ಅವರು 2014ರಿಂದ 2016ರವರೆಗೆ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
Leave a reply