ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಆರು ಮಂದಿ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳಿಗೆ ನರ್ಸ್ ತಪ್ಪು ಇಂಜೆಕ್ಷನ್ ನೀಡಿದ ನಂತರ ರೋಗಿಗಳು ಪ್ರಾಣ ಕಳೆದುಕೊಂಡಿದ್ದಾರೆ.
ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಆರು ಮಂದಿ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳಿಗೆ ನರ್ಸ್ ತಪ್ಪು ಇಂಜೆಕ್ಷನ್ ನೀಡಿದ ನಂತರ ರೋಗಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಒಡಿಶಾದ ಕೊರಾಪುಟ್ ಜಿಲ್ಲೆಯ ಮಧ್ಯಭಾಗದಲ್ಲಿರುವ ಸಾಹಿದ್ ಲಕ್ಷ್ಮಣ್ ನಾಯಕ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.
ವಿವರಗಳು ಹೀಗಿವೆ…
ಆಸ್ಪತ್ರೆಯ ಐಸಿಯು ಮತ್ತು ಶಸ್ತ್ರಚಿಕಿತ್ಸಾ ವಾರ್ಡ್ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಐದು ಮಂದಿ ರೋಗಿಗಳು ನಿನ್ನೆ ರಾತ್ರಿ ಗಂಟೆಗಳ ಅಂತರದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅವರು ಸಾಯುವ ಕೆಲವು ನಿಮಿಷಗಳ ಮುನ್ನ ಸಿಬ್ಬಂದಿ ಎರಡನೇ ಸುತ್ತಿನ ಚುಚ್ಚುಮದ್ದನ್ನು ನೀಡಿದ್ದಾರೆ ಎಂದು ಕುಟುಂಬ ಸದಸ್ಯರು ಹೇಳುತ್ತಾರೆ. ಮಧ್ಯರಾತ್ರಿಯಲ್ಲಿ ಒಬ್ಬ ನರ್ಸ್ ಬಂದು ನನ್ನ ಸಹೋದರಿ ಸೇರಿದಂತೆ ಪಕ್ಕದಲ್ಲಿದ್ದ ಮೂವರು ರೋಗಿಗಳಿಗೆ ಇಂಜೆಕ್ಷನ್ ನೀಡಿದರು. ನಂತರ ಕೆಲವೇ ಕ್ಷಣಗಳಲ್ಲಿ ಎಲ್ಲರೂ ನೋವಿನಿಂದ ನರಳುತ್ತಾ ಸಾವನ್ನಪ್ಪಿದರು ಎಂದು ಮೃತ ಮಹಿಳೆಯ ಕುಟುಂಬ ಸದಸ್ಯರು ತಮ್ಮ ದುಃಖವನ್ನು ತೋಡಿಕೊಂಡಿದ್ದಾರೆ.
ಘಟನೆಯ ಬಗ್ಗೆ ಆತಂಕ ಮುಂದುವರಿದಂತೆ, ಮತ್ತೊಬ್ಬ ರೋಗಿ ಸಾವನ್ನಪ್ಪಿದ್ದಾರೆಂದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ರೋಗಿಗೆ ಇಂದು (ಬುಧವಾರ) ಬೆಳಿಗ್ಗೆ ಇಂಜೆಕ್ಷನ್ ನೀಡಲಾಗಿತ್ತು. ಆ ರೋಗಿಯೂ ಕೂಡ ಸ್ವಲ್ಪ ಸಮಯದ ನಂತರ ಸಾವನ್ನಪ್ಪಿದ್ದಾರೆ. ಇದರಿಂದಾಗಿ ಸಾವಿನ ಸಂಖ್ಯೆ 6 ಕ್ಕೆ ಏರಿದೆ ಎಂದು ಮೃತರ ಕುಟುಂಬಸ್ಥರು ಹೇಳಿದ್ದಾರೆ. ಮೃತ ಪಟ್ಟ ಎಲ್ಲಾ ರೋಗಿಗಳು ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆಯ ನಂತರ ಚೇತರಿಸಿಕೊಳ್ಳುತ್ತಿದ್ದರು ಎಂದು ಮೃತರ ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಇಂಜೆಕ್ಷನ್ ಡೋಸ್ ನೀಡಿದ ನಂತರ ಅವರ ಆರೋಗ್ಯ ಹದಗೆಟ್ಟಿದೆ ಎಂದು ಅವರು ಹೇಳಿದ್ದಾರೆ. ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಆಸ್ಪತ್ರೆಗೆ ತಲುಪಿದ ಪೊಲೀಸರು ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರವೇ ಸಾವಿಗೆ ಕಾರಣ ತಿಳಿದುಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಗ್ಗೆ ಆಸ್ಪತ್ರೆ ಆಡಳಿತ ಮಂಡಳಿ ಇನ್ನೂ ಪ್ರತಿಕ್ರಿಯಿಸಿಲ್ಲ.
ಏತನ್ಮಧ್ಯೆ, ನಿರ್ಲಕ್ಷ್ಯ ವಹಿಸಿದ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ನಾಯಕರು ವೈದ್ಯಕೀಯ ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿದರು.


Leave a reply